Close

ಜಿಲ್ಲಾ ತಂಬಾಕು ನಿಯಂತ್ರಣ ಕೋಶ

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ೨೦೦೭-೦೮ ನೇಯ ೧೧ನೇ ಪಂಚ ವಾರ್ಷಿಕ ಯೋಜನೆಯಲ್ಲಿ ಈ ಕೆಳಕಂಡ ಉದ್ದೇಶದೊಂದಿಗೆ ಪ್ರಾರಂಭಿಸಿತು.

೧. ತಂಬಾಕು  ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.

೨. ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-೨೦೦೩ (ಸೀಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ) ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ೩ ಶ್ರೇಣಿಯಲ್ಲಿ ಅನುಷ್ಠಾನಗೊಳಿಸಲಾಗಿದೆ.

೧. ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶ

೨. ರಾಜ್ಯ ತಂಬಾಕು ನಿಯಂತ್ರಣ ಕೋಶ

೩. ಜಿಲ್ಲಾ ತಂಬಾಕು ನಿಯಂತ್ರಣ ಕೋಶ

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಮುಖ ಉದ್ದೇಶಗಳು :

೧. ಸಾರ್ವಜನಿಕರಲ್ಲಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಗಳು ಮತ್ತು ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-೨೦೦೩ ರ ಕುರಿತು ಜಾಗೃತಿ ಮೂಡಿಸುವುದು

೨. ಜಿಲ್ಲೆಯಲ್ಲಿ ಕೋಟ್ಪಾ-೨೦೦೩ ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇತರೆ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸುವುದು.

೩. ಆರೋಗ್ಯ ಶಿಕ್ಷಣ

೪. ತರಬೇತಿ ಕಾರ್ಯಕ್ರಮ – ಆರೋಗ್ಯ ಸಿಬಂದ್ದಿಗಳಿಗೆ, ಸಮಾಜ ಕಾರ್ಯಕರ್ತರುಗಳಿಗೆ, ಶಾಲಾ ಶಿಕ್ಷಕರಿಗೆ, ಕಾನೂನು ಅನುಷ್ಠಾನಾಧಿಕಾರಿಗಳು ಹಾಗೂ ಇತರೆ ಪಾಲುದಾರಿಕೆ ಇಲಾಖೆಗಳಿಗೆ.

೫. ತಂಬಾಕು ವ್ಯಸನ ಮುಕ್ತ ಕೇಂದ್ರಗಳ ಸ್ಥಾಪನೆ ಮತ್ತು ಬಲವರ್ಧನೆ.

ತಂಬಾಕು ಬಿಡಲು ಇಂದೇ ಮನಸ್ಸು ಮಾಡಿ, ಸಹಾಯಕ್ಕೆ ನಾವಿದ್ದೇವೆ

tpc

ಉಚಿತ ಆಪ್ತ ಸಮಾಲೋಚನೆಗಾಗಿ ಸಂಪರ್ಕಿಸಿ

ಉಚಿತ ಸಹಾಯವಾಣಿ : ೧೮೦೦೧೧೨೩೫೬ ಮತ್ತು ೧೦೪

ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರ,

ಜಿಲ್ಲಾ ಆಸ್ಪತ್ರೆ, ಚಾಮರಾಜನಗರ